ತುರುವೇಕೆರೆ: ಪ್ರಣಾಳಿಕೆಯಲ್ಲಿ ಘೋಷಿಸಿದ ಭರವಸೆಗಳನ್ನು ಈಡೇರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಜನರಿಟ್ಟ ವಿಶ್ವಾಸ, ನಂಬಿಕೆಯನ್ನು ಉಳಿಸಿಕೊಂಡು  ನುಡಿದಂತೆ ನಡೆಯುವ ಸರ್ಕಾರ ಎಂಬ ಕೀರ್ತಿಗೆ ಪಾತ್ರವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೌದ್ರಿ ರಂಗಪ್ಪ ತಿಳಿಸಿದರು.

ತುರುವೇಕೆರೆ ವಿಧಾನಸಭಾ ಕ್ಷೇತ್ರದ ಪೆದ್ದನಹಳ್ಳಿ ಗ್ರಾಮ ಪಂಚಾಯಿತಿಯ ಬೋಚೀಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಈ ಹಿಂದಿನ ಯಾವುದೇ ಸರ್ಕಾರ ಮಾಡದಷ್ಟು ಅಭಿವೃದ್ಧಿ ಕಾರ್ಯಗಳನ್ನು ಸಿದ್ದರಾಮಯ್ಯ ಸರ್ಕಾರ ಮಾಡಿದೆ. ಕಾಯಕವೇ ಕೈಲಾಸ ಎಂಬ ಬಸವಣ್ಣನವರ ನುಡಿಯಂತೆ ಸರ್ವ ಜಾತಿ, ಜನಾಂಗ, ಸಮುದಾಯದ ಹಿತಕ್ಕಾಗಿ ಕೋಟ್ಯಾಂತರ ರೂ ಅನುದಾನವನ್ನು ಒದಗಿಸಿ ಜನಸೇವೆಯ ಕಾಯಕದಲ್ಲಿ ತೊಡಗಿದೆ ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದು ಹಲವಾರು ಸಮೀಕ್ಷೆಗಳಿಂದ ಸಾಬೀತಾಗಿದೆ. ಇದು ಜನಪರ ಕಾರ್ಯ ಮೆಚ್ಚಿ ಜನತೆ ನೀಡಿರುವ ಉಡುಗೊರೆ ಎಂದ ಅವರು ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿಯೂ ಈ ಬಾರಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಕ್ಷೇತ್ರದಾದ್ಯಂತ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣ ನಿರ್ಮಾಣವಾಗಿದೆ. ಜನತೆ ರಾಜ್ಯ ಸರ್ಕಾರದ ಅನ್ನಭಾಗ್ಯ ಸೇರಿದಂತೆ ಯಾವುದಾದರೊಂದು ಯೋಜನೆಯ ಫಲಾನುಭವಿಗಳಾಗಿದ್ದಾರೆ. ರಾಜ್ಯದ ಪ್ರತಿ ಕುಟುಂಬಕ್ಕೂ ನೆರವಾಗುವ ನಿಟ್ಟಿನಲ್ಲಿ ಯೋಜನೆಗಳನ್ನು ಸರ್ಕಾರ ರೂಪಿಸಿದ್ದು ಜನತೆ ಕಾಂಗ್ರೆಸ್ ಪಕ್ಷವನ್ನು ಆಶೀರ್ವದಿಸಲಿದ್ದಾರೆ ಎಂದರು. ಕಾಂಗ್ರೆಸ್ ಪಕ್ಷದ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು .‌

 

ವರದಿ: ಗಿರೀಶ್ ಕೆ ಭಟ್, ತುರುವೇಕೆರೆ

Please follow and like us:
0
http://bp9news.com/wp-content/uploads/2018/03/WhatsApp-Image-2018-03-14-at-4.01.14-PM-1024x768.jpeghttp://bp9news.com/wp-content/uploads/2018/03/WhatsApp-Image-2018-03-14-at-4.01.14-PM-150x150.jpegBP9 Bureauತುಮಕೂರುತುರುವೇಕೆರೆ: ಪ್ರಣಾಳಿಕೆಯಲ್ಲಿ ಘೋಷಿಸಿದ ಭರವಸೆಗಳನ್ನು ಈಡೇರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಜನರಿಟ್ಟ ವಿಶ್ವಾಸ, ನಂಬಿಕೆಯನ್ನು ಉಳಿಸಿಕೊಂಡು  ನುಡಿದಂತೆ ನಡೆಯುವ ಸರ್ಕಾರ ಎಂಬ ಕೀರ್ತಿಗೆ ಪಾತ್ರವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೌದ್ರಿ ರಂಗಪ್ಪ ತಿಳಿಸಿದರು. ತುರುವೇಕೆರೆ ವಿಧಾನಸಭಾ ಕ್ಷೇತ್ರದ ಪೆದ್ದನಹಳ್ಳಿ ಗ್ರಾಮ ಪಂಚಾಯಿತಿಯ ಬೋಚೀಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಈ ಹಿಂದಿನ ಯಾವುದೇ ಸರ್ಕಾರ ಮಾಡದಷ್ಟು ಅಭಿವೃದ್ಧಿ ಕಾರ್ಯಗಳನ್ನು ಸಿದ್ದರಾಮಯ್ಯ ಸರ್ಕಾರ ಮಾಡಿದೆ. ಕಾಯಕವೇ...Kannada News Portal