ಅರಳೀಕೆರೆ ರವಿಕುಮಾರ್
ಅರಳೀಕೆರೆ ರವಿಕುಮಾರ್

ತುರುವೇಕೆರೆ: ಕನ್ನಡಿಗರಿಗೆ ರಕ್ಷಣೆ ಒದಗಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಅರಳೀಕೆರೆ ರವಿಕುಮಾರ್ ಆರೋಪಿಸಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ರಾಜ್ಯದ, ರಾಷ್ಟ್ರಗಳ ಜನರೂ ಕನ್ನಡ ನಾಡಿನಲ್ಲಿ ವಾಸವಾಗಿದ್ದಾರೆ. ಬೇರೆ ಭಾಷಿಕರಿಗೆ ಯಾವುದೇ ತೊಂದರೆಯಾಗದಂತೆ ಅವರೂ‌ ನಮ್ಮವರೆಂಬ ಭಾವನೆಯಿಂದ ಕನ್ನಡಿಗರು ಪ್ರೀತಿ, ಅಭಿಮಾನದಿಂದ ಕಾಣುತ್ತಿದ್ದಾರೆ.

ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕನ್ನಡಿಗರ ಮೇಲೆ ದೌರ್ಜನ್ಯವೆಸಗುತ್ತಿದ್ದಾರೆ. ಆದರೂ ಸಹ ಕನ್ನಡಿಗರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದರು.

ರಾಜ್ಯ ಸರ್ಕಾರ ಕೇವಲ ಭಾಷಣದಲ್ಲಿ ಕನ್ನಡಪರ, ಕನ್ನಡಿಗರ ಪರ ಇದ್ದೇವೆಂದು ಹೇಳಿದರೆ ಸಾಲದು. ಕನ್ನಡಿಗರಿಗೆ ರಕ್ಷಣೆ ಒದಗಿಸಬೇಕು, ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ ಅವರು, ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲು ಹಿಂಜರಿದಲ್ಲಿ ಕನ್ನಡಪರ ಸಂಘಟನೆಗಳೊಡಗೂಡಿ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದರು.

ವರದಿ: ಗಿರೀಶ್ ಭಟ್, ತುರುವೇಕೆರೆ

Please follow and like us:
0
BP9 News Bureauತುಮಕೂರುತುರುವೇಕೆರೆ: ಕನ್ನಡಿಗರಿಗೆ ರಕ್ಷಣೆ ಒದಗಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಅರಳೀಕೆರೆ ರವಿಕುಮಾರ್ ಆರೋಪಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ರಾಜ್ಯದ, ರಾಷ್ಟ್ರಗಳ ಜನರೂ ಕನ್ನಡ ನಾಡಿನಲ್ಲಿ ವಾಸವಾಗಿದ್ದಾರೆ. ಬೇರೆ ಭಾಷಿಕರಿಗೆ ಯಾವುದೇ ತೊಂದರೆಯಾಗದಂತೆ ಅವರೂ‌ ನಮ್ಮವರೆಂಬ ಭಾವನೆಯಿಂದ ಕನ್ನಡಿಗರು ಪ್ರೀತಿ, ಅಭಿಮಾನದಿಂದ ಕಾಣುತ್ತಿದ್ದಾರೆ. ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕನ್ನಡಿಗರ ಮೇಲೆ ದೌರ್ಜನ್ಯವೆಸಗುತ್ತಿದ್ದಾರೆ. ಆದರೂ ಸಹ ಕನ್ನಡಿಗರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ...Kannada News Portal