ಬೆಂಗಳೂರು :  ಕುಮಾರಸ್ವಾಮಿ ಅವರ ಜೊತೆ ನಮ್ಮ ಪಕ್ಷದ ಒಬ್ಬರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಬೇಕು ಎಂದು ಕಾಂಗ್ರೆಸ್ ಶಾಸಕರು ಪಟ್ಟು ಹಿಡಿದಿದ್ದಾರೆ.ನಗರದ ಖಾಸಗಿ ಹೊಟೇಲ್​​​ನಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕರು ಹಾಗೂ ಪ್ರಮುಖ ನಾಯಕರ ಸಭೆಯಲ್ಲಿ ಸಚಿವ ಸಂಪುಟ ಸಭೆ ವಿಸ್ತರಣೆ, ನಾಳೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದ ಬಗ್ಗೆ ಗಂಭೀರ ಚರ್ಚೆ ನಡೆದಿದೆ.

ಮೈತ್ರಿಕೂಟದ ಸರ್ಕಾರ ಮೊದಲು ಬಹುಮತ ಸಾಬೀತುಪಡಿಸಲಿ ನಂತರ ಸಂಪುಟ ವಿಸ್ತರಣೆ ಮಾಡಿದರಾಯಿತು ಎಂದು ಜೆಡಿಎಸ್ ನಾಯಕರು ಹೇಳುತ್ತಿದ್ದಾರೆ. ಇದು ಸರಿಯಲ್ಲ. ಕುಮಾರಸ್ವಾಮಿಯವರು ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲೇ ಕಾಂಗ್ರೆಸ್​​ನವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಬೇಕು ಎಂದು ಕಾಂಗ್ರೆಸ್ ಶಾಸಕರು ಪಟ್ಟು ಹಿಡಿದಿದ್ದಾರೆ.

ಕುಮಾರಸ್ವಾಮಿಯವರು ಕೂಡ ಕಾಂಗ್ರೆಸ್​​ನವರು ತಮ್ಮ ಜೊತೆ ಪ್ರಮಾಣ ವಚನ ಸ್ವೀಕರಿಸಲು ಅಭ್ಯಂತರವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಕಾಂಗ್ರೆಸ್​​ ನಲ್ಲಿ ಯಾರು ಎಂಬ ಪ್ರಶ್ನೆ ತೀವ್ರಗೊಂದಲ ಹುಟ್ಟುಹಾಕಿದೆ. ಉಪಮುಖ್ಯಮಂತ್ರಿ ಹುದ್ದೆಗಾಗಿ ಈಗಾಗಲೇ ಬಹಳಷ್ಟು ಮಂದಿ ಸರತಿ ಸಾಲಿನಲ್ಲಿ ನಿಂತು ಲಾಬಿ ಮಾಡುತ್ತಿದ್ದಾರೆ. ಆರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳಲಾಗಿತ್ತು. ಆದರೆ ನಂತರ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಹಿಡಿದಿಟ್ಟುಕೊಂಡು ಬಿಜೆಪಿಯ ವಿಶ್ವಾಸ ಮತಯಾಚನೆಗೆ ಸೋಲುಂಟಾಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಿ.ಕೆ.ಶಿವಕುಮಾರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಬೇಡಿಕೆ ಕೇಳಿಬಂತು.

ಅದರ ಬೆನ್ನಲ್ಲೇ ಲಿಂಗಾಯತ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು, ಶ್ಯಾಮನೂರು ಶಿವಶಂಕರಪ್ಪ ಅಥವಾ ಎಂ.ಬಿ.ಪಾಟೀಲ್ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕೆಂಬ ಒತ್ತಡ ಕೇಳಿ ಬರುತ್ತಿದೆ. ಈಗ ಅಲ್ಪಸಂಖ್ಯಾತ ಸಮುದಾಯದ ರೋಷನ್​​​​ ಬೇಗ್ ಅವರ ಹೆಸರು ಪ್ರಬಲವಾಗಿ ಕೇಳಲಾರಂಭಿಸಿದ್ದು, ಏಳು ಬಾರಿ ಶಾಸಕರಾಗಿರುವ ರೋಷನ್ ಬೇಗ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಡ ಹೇರಲಾಗುತ್ತಿದೆ.

ಒಂದು ಕಾಲದಲ್ಲಿ ಸಿದ್ದರಾಮಯ್ಯನವರ ಆಪ್ತರಾಗಿದ್ದ ಬೆಳಗಾವಿಯ ಸತೀಶ್ ಜಾರಕಿ ಹೊಳಿ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದು ವಾಲ್ಮೀಕಿ ಸಮುದಾಯ ಬೇಡಿಕೆ ಮುಂದಿಟ್ಟಿದೆ. ಮುಂಬೈ-ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್​​ನ ಗೆಲುವಿಗೆ ಸತೀಶ್ ಜಾರಕಿಹೊಳಿ ಅವರ ಕೊಡುಗೆ ಹೆಚ್ಚಿದೆ. ಹೀಗಾಗಿ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕೆಂದು ಹೇಳಲಾಗುತ್ತಿದೆ.
ಹೀಗಾಗಿ ಆರಂಭದಲ್ಲಿದ್ದ ತಿಳಿಯ ವಾತಾವರಣ ದಿನಕಳೆದಂತೆ ಗೋಜಲಾಗುತ್ತಿದ್ದು, ಉಪಮುಖ್ಯಮಂತ್ರಿ ಹುದ್ದೆಗೆ ತೀವ್ರ ಪೈಪೋಟಿ ಆರಂಭವಾಗಿದೆ. ಇಂದು ಸಂಜೆ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಾಯಕರು ಸಭೆ ನಡೆಸಿ ನಾಳೆ ಯಾರೆಲ್ಲ ಪ್ರಮಾಣ ವಚನ ಸ್ವೀಕರಿಸಬೇಕೆಂಬ ಬಗ್ಗೆ ತೀರ್ಮಾನಿಸುತ್ತಾರೆ ಎಂದು ಹೇಳಲಾಗಿದೆ.

Please follow and like us:
0
http://bp9news.com/wp-content/uploads/2018/05/jdscongress-30-1472561048.jpghttp://bp9news.com/wp-content/uploads/2018/05/jdscongress-30-1472561048-150x150.jpgPolitical Bureauಪ್ರಮುಖರಾಜಕೀಯlet us take oath !!! Mike Begie Fate !!!,Why Kumaraswamy is the only oneಬೆಂಗಳೂರು :  ಕುಮಾರಸ್ವಾಮಿ ಅವರ ಜೊತೆ ನಮ್ಮ ಪಕ್ಷದ ಒಬ್ಬರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಬೇಕು ಎಂದು ಕಾಂಗ್ರೆಸ್ ಶಾಸಕರು ಪಟ್ಟು ಹಿಡಿದಿದ್ದಾರೆ.ನಗರದ ಖಾಸಗಿ ಹೊಟೇಲ್​​​ನಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕರು ಹಾಗೂ ಪ್ರಮುಖ ನಾಯಕರ ಸಭೆಯಲ್ಲಿ ಸಚಿವ ಸಂಪುಟ ಸಭೆ ವಿಸ್ತರಣೆ, ನಾಳೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಮೈತ್ರಿಕೂಟದ ಸರ್ಕಾರ ಮೊದಲು ಬಹುಮತ ಸಾಬೀತುಪಡಿಸಲಿ ನಂತರ ಸಂಪುಟ ವಿಸ್ತರಣೆ ಮಾಡಿದರಾಯಿತು ಎಂದು ಜೆಡಿಎಸ್...Kannada News Portal